2 Kings 23:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Kannada BSI Bible 2016
ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ
Kannada Bible (KNCL) BSI 2016
ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.