2 Kings 23:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
Kannada BSI Bible 2016
ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.
Kannada Bible (KNCL) BSI 2016
ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.