2 Kings 23:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನು ಎಲ್ಲಾ ಜನರಿಗೆ - ಈ ನಿಬಂಧನಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.