2 Kings 23:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
Kannada BSI Bible 2016
ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.
Kannada Bible (KNCL) BSI 2016
ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.