2 Kings 23:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
Kannada BSI Bible 2016
ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.
Kannada Bible (KNCL) BSI 2016
ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.