2 Kings 23:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
Kannada BSI Bible 2016
ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.