2 Kings 23:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
Kannada BSI Bible 2016
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.
Kannada Bible (KNCL) BSI 2016
ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.