2 Kings 23:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
Kannada BSI Bible 2016
ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.
Kannada Bible (KNCL) BSI 2016
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.