2 Kings 23:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
Kannada BSI Bible 2016
ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಹಾಜನು ಅರಸನಾದಾಗ ಇಪ್ಪತ್ತ ಮೂರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಅದ ಹಮೂಟಲ್ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.