2 Kings 23:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
Kannada BSI Bible 2016
ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.