2 Kings 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Kannada BSI Bible 2016
ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Kannada Bible (KNCL) BSI 2016
ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.