2 Kings 23:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
Kannada BSI Bible 2016
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.