2 Kings 24:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
Kannada BSI Bible 2016
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.
Kannada Bible (KNCL) BSI 2016
ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.