2 Kings 24:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
Kannada BSI Bible 2016
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
Kannada Bible (KNCL) BSI 2016
ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.