2 Kings 24:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.
Kannada BSI Bible 2016
ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.
Kannada Bible (KNCL) BSI 2016
ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.