2 Kings 25:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
Kannada BSI Bible 2016
ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
Kannada Bible (KNCL) BSI 2016
ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.