2 Kings 25:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
Kannada BSI Bible 2016
ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
Kannada Bible (KNCL) BSI 2016
ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಡಲಿನ ಆಕಾರದ ಪಾತ್ರೆ, ಚಕ್ರದ ಬಂಡಿಗಳು ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.