2 Kings 25:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
Kannada BSI Bible 2016
ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು.
Kannada Bible (KNCL) BSI 2016
ಪ್ರತಿಯೊಂದು ಕಂಬ ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗು ದಾಳಿಂಬೆ ಹಣ್ಣುಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.