2 Kings 25:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
Kannada BSI Bible 2016
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
Kannada Bible (KNCL) BSI 2016
ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.