2 Kings 25:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
Kannada BSI Bible 2016
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು.
Kannada Bible (KNCL) BSI 2016
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.