2 Kings 25:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
Kannada BSI Bible 2016
ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು.
Kannada Bible (KNCL) BSI 2016
ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.