2 Kings 25:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
Kannada BSI Bible 2016
ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
Kannada Bible (KNCL) BSI 2016
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.