2 Kings 25:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
Kannada BSI Bible 2016
ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.
Kannada Bible (KNCL) BSI 2016
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.