2 Kings 25:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
Kannada BSI Bible 2016
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.