2 Kings 25:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
Kannada BSI Bible 2016
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು
Kannada Bible (KNCL) BSI 2016
ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,