2 Kings 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಬನ ಮಗನಾದ ಯೋರಾವುನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾವುನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾವುನು ಹನ್ನೆರಡು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
Kannada BSI Bible 2016
ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರುಷ ಆಳಿದನು.
Kannada Bible (KNCL) BSI 2016
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹನ್ನೆರಡು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರ್ಷದಲ್ಲಿ, ಅಹಾಬನ ಮಗ ಯೋರಾಮನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು.