2 Kings 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸ್ರೇಲಿನ ರಾಜನಾದ ಯೋರಾವುನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
Kannada BSI Bible 2016
ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.
Kannada Bible (KNCL) BSI 2016
ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು, “ಅಯ್ಯೋ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾರಲ್ಲಾ?” ಎಂದನು.