2 Kings 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು, ‘ನೀವು ಗಾಳಿಯನ್ನೂ, ಮಳೆಯನ್ನೂ ಕಾಣುವುದಿಲ್ಲ. ಆದರೆ ನೀವು ನಿಮ್ಮ ದನಗಳೂ, ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬುವುದು.’