2 Kings 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
Kannada BSI Bible 2016
ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹೃತರಾಗಿರಬೇಕು; ಮೋವಾಬ್ಯರೇ, ಏಳಿರಿ, ಸುಲಿಗೆಗೆ ಹೋಗೋಣ ಎಂದು ಕೂಗಿಕೊಂಡು
Kannada Bible (KNCL) BSI 2016
ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ಇದು ರಕ್ತವೇ. ಆ ಅರಸರು ತಮ್ಮನ್ನು ತಾವೇ ನಿಜವಾಗಿ ನಾಶಮಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ. ಈಗ ಮೋವಾಬ್ಯರೇ ಕೊಳ್ಳೆಗೆ ಬನ್ನಿರಿ,” ಎಂದು ಹೇಳಿಕೊಂಡರು.