2 Kings 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
Kannada BSI Bible 2016
ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಪಾಳೆಯಕ್ಕೆ ಹೋದರು. ಆದರೆ ಇಸ್ರಾಯೇಲ್ಯರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸುತ್ತಾ
Kannada Bible (KNCL) BSI 2016
ಆದರೆ ಇಸ್ರಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ, ಅವರು ಮೋವಾಬ್ಯರನ್ನು ಸಂಹರಿಸುತ್ತಾ, ಅವರ ದೇಶದೊಳಗೆ ನುಗ್ಗಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇಸ್ರಾಯೇಲಿನ ದಂಡಿಗೆ ಬಂದಾಗ, ಇಸ್ರಾಯೇಲರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಸೋಲಿಸಿ, ಮೋವಾಬ್ಯರನ್ನು ಅವರ ದೇಶದವರೆಗೂ ಹೊಡೆಯುತ್ತಾ ಬಂದರು.