2 Kings 3:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
Kannada BSI Bible 2016
ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು.
Kannada Bible (KNCL) BSI 2016
ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು.