2 Kings 3:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
Kannada BSI Bible 2016
ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
Kannada Bible (KNCL) BSI 2016
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.