2 Kings 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷಾಫಾಟನು ಯೋರಾವುನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು. “ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾವುನು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
Kannada BSI Bible 2016
ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಮಾರ್ಗವಾಗಿ ಹೋಗಬೇಕೆಂದು ವಿಚಾರಿಸಿದಾಗ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಅಂದನು.
Kannada Bible (KNCL) BSI 2016
ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.