2 Kings 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
Kannada BSI Bible 2016
ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -
Kannada Bible (KNCL) BSI 2016
ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.