2 Kings 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, “ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.
Kannada BSI Bible 2016
ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಗೇಹಜಿಯ ಮುಖಾಂತರವಾಗಿ ಆಕೆಯನ್ನು - ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದಿ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರವಾಗಿ ಅರಸನ ಮುಂದಾಗಲಿ ಸೇನಾಪತಿಯ ಮುಂದಾಗಲಿ ಮಾತಾಡಬೇಕೋ ಎಂದು ಕೇಳಲು ಆಕೆಯು - ನಾನು ಸ್ವಕುಲದವರ ಮಧ್ಯದಲ್ಲಿ ಸುಖವಾಗಿದ್ದೇನೆ ಎಂದು ಉತ್ತರಕೊಟ್ಟಳು.
Kannada Bible (KNCL) BSI 2016
ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.