2 Kings 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
Kannada BSI Bible 2016
ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.
Kannada Bible (KNCL) BSI 2016
ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.