2 Kings 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.
Kannada BSI Bible 2016
ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಗಲು ಮುಚ್ಚಿ ಗಂಡನನ್ನು ಕರಿಸಿ ಅವನಿಗೆ - ದಯವಿಟ್ಟು ನನಗೋಸ್ಕರ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು; ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿ ಬರುತ್ತೇನೆ ಎಂದು ಹೇಳಿದಳು.
Kannada Bible (KNCL) BSI 2016
“ದಯವಿಟ್ಟು ನನಗಾಗಿ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸಿ; ನಾನು ಬೇಗನೆ ಆ ದೈವಪುರುಷನ ಬಳಿಗೆ ಹೋಗಿ ಬರುತ್ತೇನೆ,” ಎಂದು ಕೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.