2 Kings 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.
Kannada BSI Bible 2016
ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.
Kannada Bible (KNCL) BSI 2016
ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.