2 Kings 4:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
Kannada BSI Bible 2016
ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.