2 Kings 4:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶೂನೇಮಿನ ಆ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
Kannada BSI Bible 2016
ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ದೇವರ ಮನುಷ್ಯನಿಗೆ - ನನಗೆ ಮಗನು ಬೇಕೆಂದು ಸ್ವಾವಿುಯಾದ ನಿನ್ನನ್ನು ಬೇಡಿಕೊಂಡೆನೋ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲಾ ಅಂದಳು.
Kannada Bible (KNCL) BSI 2016
ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು.