2 Kings 4:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.
Kannada BSI Bible 2016
ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿಲ್ಲ, ಜೀವದ ಲಕ್ಷಣವಿಲ್ಲ. ಆದದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ - ಹುಡುಗನು ಎಚ್ಚರವಾಗಲಿಲ್ಲ ಅಂದನು.
Kannada Bible (KNCL) BSI 2016
ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.