2 Kings 4:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
Kannada BSI Bible 2016
ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರಿಗಿ ಅವನ ಮೇಲೆ ಬೋರ್ಲ ಬೀಳಲು ಹುಡುಗನು ಏಳು ಸಾರಿ ಸೀತು ಕಣ್ದೆರೆದನು.
Kannada Bible (KNCL) BSI 2016
ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.