2 Kings 4:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
Kannada BSI Bible 2016
ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಷನು ಗೇಹಜಿಗೆ - ಶೂನೇಮ್ಯಳನ್ನು ಕರೆ ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ ಎಲೀಷನು ಆಕೆಗೆ - ನಿನ್ನ ಮಗನನ್ನು ತೆಗೆದುಕೋ ಎಂದು ಹೇಳಿದನು.
Kannada Bible (KNCL) BSI 2016
ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.