2 Kings 4:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
Kannada BSI Bible 2016
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.