2 Kings 4:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
Kannada BSI Bible 2016
ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ - ದೇವರ ಮನುಷ್ಯನೇ, ಪಾತ್ರೆಯಲ್ಲಿ ವಿಷ ಎಂದು ಕೂಗಿದರು.
Kannada Bible (KNCL) BSI 2016
ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.