2 Kings 4:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.
Kannada Bible (KNCL) BSI 2016
ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.