2 Kings 4:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು; ‘ಅವರು ತಿಂದರೂ ಆಹಾರವು ಉಳಿಯುತ್ತದೆ”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
Kannada BSI Bible 2016
ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ ಅಂದನು. ಎಲೀಷನು ಅವನಿಗೆ - ಇರಲಿ, ಕೊಡು; ಅವರು ಊಟ ಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “ ‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.