2 Kings 4:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವು ಉಳಿದುಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.
Kannada BSI Bible 2016
ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇವಕನು ಬಡಿಸಲು ಯೆಹೋವನು ಹೇಳಿದಂತೆ ಜನರು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಂಡರು.
Kannada Bible (KNCL) BSI 2016
ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಸೇವಕನು ಬಡಿಸಿದನು. ಯೆಹೋವ ದೇವರು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಯಿತು.