2 Kings 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ” ಎಂದಳು. ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, “ಇಲ್ಲಿ ಯಾವ ಪಾತ್ರೆಗಳೂ ಇಲ್ಲ” ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
Kannada BSI Bible 2016
ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತ್ರೆಗಳು ತುಂಬಿದಾಗ ಆಕೆಯು ಮಗನಿಗೆ - ಇನ್ನೊಂದು ಪಾತ್ರೆಯನ್ನು ತಂದಿಡು ಅನ್ನಲು ಅವನು - ಪಾತ್ರೆಗಳು ತೀರಿದವೆಂದು ಉತ್ತರಕೊಟ್ಟನು.
Kannada Bible (KNCL) BSI 2016
ಪಾತ್ರೆಗಳು ತುಂಬಿದಾಗ, ಆಕೆ ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು,” ಅನ್ನಲು ಅವನು, “ಪಾತ್ರೆಗಳು ತೀರಿಹೋದುವು,” ಎಂದು ಉತ್ತರಕೊಟ್ಟನು. ಕೂಡಲೆ ಎಣ್ಣೆ ಉಕ್ಕುವುದೂ ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.