2 Kings 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
Kannada BSI Bible 2016
ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಎಣ್ಣೆಯುಕ್ಕುವದು ನಿಂತು ಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
Kannada Bible (KNCL) BSI 2016
ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.